ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತು ಶೈಕ್ಷಣಿಕ ಅಭಿವೃದ್ಧಿ ಸಾಧಿಸಿದರೆ ಮಾತ್ರ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತದೆ ಎಂದು ದೊಮ್ಮತಮರಿ ಗ್ರಾಮ ಪಂಚಾಯಿತಿ ಪಿಡಿಓ ರಂಗಧಾಮಯ್ಯ ಅಭಿಪ್ರಾಯಪಟ್ಟರು.
ಪಾವಗಡ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತು ಶೈಕ್ಷಣಿಕ ಅಭಿವೃದ್ಧಿ ಸಾಧಿಸಿದರೆ ಮಾತ್ರ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತದೆ ಎಂದು ದೊಮ್ಮತಮರಿ ಗ್ರಾಮ ಪಂಚಾಯಿತಿ ಪಿಡಿಓ ರಂಗಧಾಮಯ್ಯ ಅಭಿಪ್ರಾಯಪಟ್ಟರು.
ತಾಲ್ಲೂಕಿನ ದೊಮ್ಮತಮರಿ ಗ್ರಾಮದ ಎಸ್ ಎಂಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಸಹ ಶಿಕ್ಷಕ ಗಂಗಾಧರ್ ಮಾತನಾಡಿ, ಮಕ್ಕಳಿಗೆ ಶಿಕ್ಷಣವೇ ಬದುಕಿನ ದಾರಿದೀಪ. ಈ ನಿಟ್ಟಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೃಜನಾತ್ಮಕ ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಎಸ್ಎಂ ಎಸ್ ಶಾಲೆಯ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಿಕಟ ಪೂರ್ವ ಬಿಆರ್ ಸಿ ಪವನ್ ಕುಮಾರ್ ರೆಡ್ಡಿ ಮಾತನಾಡಿ, ಕಳೆದ 14 ವರ್ಷಗಳಿಂದ ಎಸ್ಎಂ ಎಸ್ ಶಾಲೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಎಸ್ಎಂಎಸ್ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಹನುಮಂತರಾಯಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.